Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:7 - ಕನ್ನಡ ಸತ್ಯವೇದವು C.L. Bible (BSI)

7 ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೇನಾಧೀಶ್ವರನಾದ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ. ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:7
10 ತಿಳಿವುಗಳ ಹೋಲಿಕೆ  

ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?


ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II


ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ : “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು