Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:8 - ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಿಂದಿನ ಕಾಲದಲ್ಲಿ ನೀನು ನಮ್ಮನ್ನು ಅಮೂಲ್ಯವಾದ ಸಸಿಯಂತೆ ನೋಡಿಕೊಂಡೆ. ನಿನ್ನ “ದ್ರಾಕ್ಷಾಲತೆ”ಯನ್ನು ಈಜಿಪ್ಟಿನಿಂದ ತೆಗೆದುಕೊಂಡು ಬಂದೆ. ನೀನು ಬೇರೆ ಜನರನ್ನು ಈ ನಾಡಿನಿಂದ ಹೊರಗಟ್ಟಿ ನಿನ್ನ “ದ್ರಾಕ್ಷಾಲತೆ”ಯನ್ನು ನೆಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:8
16 ತಿಳಿವುಗಳ ಹೋಲಿಕೆ  

ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.


ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.


ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.


ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.


ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.


ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು