Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:9 - ಕನ್ನಡ ಸತ್ಯವೇದವು C.L. Bible (BSI)

9 ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ದ್ರಾಕ್ಷಾಲತೆ”ಯು ಬೆಳೆಯಲೆಂದು ಭೂಮಿಯನ್ನು ಹದ ಮಾಡಿದೆ. ಅದರ ಬೇರುಗಳು ಬಲವಾಗಿ ಬೆಳೆಯಲು ಸಹಾಯಮಾಡಿದೆ. ಬಹುಬೇಗನೆ “ದ್ರಾಕ್ಷಾಲತೆ”ಯು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:9
17 ತಿಳಿವುಗಳ ಹೋಲಿಕೆ  

ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.


ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


ಆ ದಿನದಲ್ಲಿ ಪೇಳ್ವರು ಸರ್ವೇಶ್ವರ : “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು