Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:10 - ಕನ್ನಡ ಸತ್ಯವೇದವು C.L. Bible (BSI)

10 “ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿಮ್ಮನ್ನು ಐಗುಪ್ತದಿಂದ ಕರತಂದ ಯೆಹೋವನೆಂಬ ನಾನೇ ನಿಮ್ಮ ದೇವರು. ಅಗಲವಾಗಿ ಬಾಯಿದೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನಾದ ನಾನೇ ನಿನ್ನ ದೇವರು. ನಿನ್ನನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ನಾನೇ. ಇಸ್ರೇಲೇ, ನಿನ್ನ ಬಾಯನ್ನು ತೆರೆ, ಆಗ ನಾನು ನಿನಗೆ ತಿನ್ನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:10
16 ತಿಳಿವುಗಳ ಹೋಲಿಕೆ  

“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.


“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು