Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:2 - ಕನ್ನಡ ಸತ್ಯವೇದವು C.L. Bible (BSI)

2 ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ ಸ್ವರಮಂಡಲವನ್ನೂ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ವಾದ್ಯವನ್ನು ನುಡಿಸಲಾರಂಭಿಸಿರಿ; ದಮ್ಮಡಿಯನ್ನು ಬಡಿಯಿರಿ. ಇಂಪಾದ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನು ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:2
11 ತಿಳಿವುಗಳ ಹೋಲಿಕೆ  

ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II


ಬಳಿಕ ಅವರೆಲ್ಲರೂ ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಜೆಕರ್ಯ, ಹನನ್ಯ ಇವರೂ , ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.


ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು