Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:6 - ಕನ್ನಡ ಸತ್ಯವೇದವು C.L. Bible (BSI)

6 ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು : I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:6
9 ತಿಳಿವುಗಳ ಹೋಲಿಕೆ  

ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?


ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ಅವರು ಅರಸನ ಸೇವೆಯಲ್ಲಿ ಕುಂಬಾರರಾಗಿದ್ದು ನೆಟಾಯಿಮ್ ಮತ್ತು ಗೆದೇರ ಪಟ್ಟಣಗಳಲ್ಲಿ ವಾಸಿಸಿದ್ದರು.


ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II


ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು