Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:7 - ಕನ್ನಡ ಸತ್ಯವೇದವು C.L. Bible (BSI)

7 “ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀವು ಆಪತ್ತಿನಲ್ಲಿದ್ದಾಗ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆಗ ನಾನು ನಿಮ್ಮನ್ನು ಬಿಡಿಸಿದೆನು. ನಾನು ಕಾರ್ಮೋಡದಲ್ಲಿ ಮರೆಯಾಗಿದ್ದರೂ ನಿಮಗೆ ಉತ್ತರಿಸಿದೆನು. ನಾನು ನಿಮ್ಮನ್ನು ಮೆರೀಬಾದ ನೀರಿನಿಂದ ಪರೀಕ್ಷಿಸಿದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:7
16 ತಿಳಿವುಗಳ ಹೋಲಿಕೆ  

ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.


ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.


ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.


“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.


‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು