Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 82:1 - ಕನ್ನಡ ಸತ್ಯವೇದವು C.L. Bible (BSI)

1 ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 82:1
12 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II


ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II


“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.


ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು