Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:14 - ಕನ್ನಡ ಸತ್ಯವೇದವು C.L. Bible (BSI)

14 ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಾಡನ್ನು ನಾಶಮಾಡುವ ಬೆಂಕಿಯಂತೆಯೂ ಬೆಟ್ಟಗಳನ್ನು ಸುಟ್ಟುಹಾಕುವ ಅಗ್ನಿಜ್ವಾಲೆಯಂತೆಯೂ ಅವರನ್ನು ನಾಶಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಡವಿ ಸುಡುವ ಬೆಂಕಿಯ ಹಾಗೆಯೂ, ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:14
11 ತಿಳಿವುಗಳ ಹೋಲಿಕೆ  

‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.


ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?


ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು