Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:15 - ಕನ್ನಡ ಸತ್ಯವೇದವು C.L. Bible (BSI)

15 ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಿರುಗಾಳಿಯಿಂದ ಕೊಚ್ಚಿಕೊಂಡು ಹೋಗುವ ಧೂಳಿನಂತೆ ಅವರನ್ನು ಬೆನ್ನಟ್ಟಿಹೋಗು. ಸುಂಟರ ಗಾಳಿಯಂತೆ ಅವರನ್ನು ನಡುಗಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:15
11 ತಿಳಿವುಗಳ ಹೋಲಿಕೆ  

ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II


ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು