ಕೀರ್ತನೆಗಳು 83:18 - ಕನ್ನಡ ಸತ್ಯವೇದವು C.L. Bible (BSI)18 ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೆಹೋವನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”