Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:4 - ಕನ್ನಡ ಸತ್ಯವೇದವು C.L. Bible (BSI)

4 ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆಯೂ ಅವರನ್ನು ಸಂಹರಿಸೋಣ ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ ‘ಇಸ್ರೇಲ್’ ಎಂಬ ಹೆಸರೇ ಅಳಿದುಹೋಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:4
14 ತಿಳಿವುಗಳ ಹೋಲಿಕೆ  

ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.


‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II


ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.


ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.


ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.


ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;


ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.


ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು.


“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು