ಕೀರ್ತನೆಗಳು 84:11 - ಕನ್ನಡ ಸತ್ಯವೇದವು C.L. Bible (BSI)11 ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ. ಅಧ್ಯಾಯವನ್ನು ನೋಡಿ |