Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:2 - ಕನ್ನಡ ಸತ್ಯವೇದವು C.L. Bible (BSI)

2 ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. [ಆದರೆ ಈಗ] ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:2
12 ತಿಳಿವುಗಳ ಹೋಲಿಕೆ  

ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II


ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ : “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು :


ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!


(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?


ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು