Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:3 - ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:3
10 ತಿಳಿವುಗಳ ಹೋಲಿಕೆ  

ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II


ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II


ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II


“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು