Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:4
13 ತಿಳಿವುಗಳ ಹೋಲಿಕೆ  

ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II


ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II


ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು