Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:5 - ಕನ್ನಡ ಸತ್ಯವೇದವು C.L. Bible (BSI)

5 ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನಲ್ಲೇ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಿಕರಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನಲ್ಲಿ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಾಪರರಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:5
17 ತಿಳಿವುಗಳ ಹೋಲಿಕೆ  

ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.


ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II


ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು