Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 84:7 - ಕನ್ನಡ ಸತ್ಯವೇದವು C.L. Bible (BSI)

7 ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 84:7
20 ತಿಳಿವುಗಳ ಹೋಲಿಕೆ  

ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II


“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.


ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.


ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II


ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು