Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದೀ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:1
13 ತಿಳಿವುಗಳ ಹೋಲಿಕೆ  

ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.


ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II


ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”


ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.


ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.


ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.


ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು