Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:2 - ಕನ್ನಡ ಸತ್ಯವೇದವು C.L. Bible (BSI)

2 ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಪ್ರಜೆಯ ದ್ರೋಹವನ್ನು ಕ್ಷವಿುಸಿದ್ದೀ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:2
10 ತಿಳಿವುಗಳ ಹೋಲಿಕೆ  

ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.


ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II


ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು