Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 85:5 - ಕನ್ನಡ ಸತ್ಯವೇದವು C.L. Bible (BSI)

5 ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸದಾಕಾಲವೂ ನಮ್ಮ ಮೇಲೆ ಸಿಟ್ಟು ಮಾಡಿಕೊಳ್ಳುವೆಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸದಾಕಾಲವೂ ನಮ್ಮ ಮೇಲೆ ಸಿಟ್ಟುಮಾಡುವಿಯಾ? ತಲತಲಾಂತರಗಳಿಗೂ ಕೋಪವನ್ನು ಬೆಳೆಸುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಮ್ಮ ಮೇಲೆ ಸದಾಕಾಲ ಕೋಪದಿಂದಿರುವೆಯಾ? ನಮ್ಮ ಮೇಲೆ ತಲತಲಾಂತರಗಳವರೆಗೂ ಕೋಪವನ್ನು ಬೆಳೆಸಬೇಕೆಂದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 85:5
12 ತಿಳಿವುಗಳ ಹೋಲಿಕೆ  

ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II


ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II


ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;


ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು