Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:10 - ಕನ್ನಡ ಸತ್ಯವೇದವು C.L. Bible (BSI)

10 ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮಹೋನ್ನತನೂ ಮಹತ್ಕಾರ್ಯಗಳನ್ನು ನಡಿಸುವವನೂ ನೀನು; ದೇವರು ನೀನೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:10
20 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು