Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. ನಾನು ಜೀವಿಸುತ್ತಾ ನಿನ್ನ ಸತ್ಯತೆಗಳಿಗೆ ವಿಧೇಯನಾಗುವೆನು. ನಿನ್ನ ಹೆಸರನ್ನು ಆರಾಧಿಸಲು ನನಗೆ ಸಹಾಯಮಾಡು. ನನ್ನ ಜೀವನದಲ್ಲಿ ಅದೇ ಅತ್ಯಂತ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:11
27 ತಿಳಿವುಗಳ ಹೋಲಿಕೆ  

ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II


ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?


ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.


ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು