Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:13 - ಕನ್ನಡ ಸತ್ಯವೇದವು C.L. Bible (BSI)

13 ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀನು ನನ್ನ ಮೇಲೆ ಎಷ್ಟೋ ಪ್ರೀತಿಯನ್ನು ಇಟ್ಟಿರುವೆ. ನೀನು ನನ್ನನ್ನು ಪಾತಾಳದಿಂದ ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:13
17 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II


ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II


ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ದಬ್ಬಿರುವೆ ನೀನೆನ್ನನು ಅಧೋಲೋಕಕೆ I ಅಗಾಧಸ್ಥಳಕೆ, ಗಾಢ ಅಂಧಕಾರಕೆ II


‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,


ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ.


ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.


ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.


ಮೀರಿದೆ ನಿನ್ನಚಲಪ್ರೀತಿ ಗಗನ ಮಂಡಲವನು I ಮುಚ್ಚಿದೆ ನಿನ್ನ ಸತ್ಯಸಂಧತೆ ಮೇಘರಾಶಿಯನು II


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು