Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:16 - ಕನ್ನಡ ಸತ್ಯವೇದವು C.L. Bible (BSI)

16 ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಮೊರೆಗೆ ಕಿವಿಗೊಟ್ಟು ಕರುಣೆತೋರು. ನಿನ್ನ ಸೇವಕನಾದ ನನಗೆ ಬಲವನ್ನು ದಯಪಾಲಿಸು. ನಿನ್ನ ಸೇವಕನ ಮಗನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:16
18 ತಿಳಿವುಗಳ ಹೋಲಿಕೆ  

ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II


ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;


ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II


ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II


ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II


ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II


ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II


ಆಗ ಮರಿಯಳು "ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


“ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು