Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 86:17 - ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಹಗೆಗಾರರು ನೋಡಿ - ಯೆಹೋವನು ನೆರವಾಗಿ ಇವನನ್ನು ಸಂತೈಸಿದ್ದಾನೆಂದು ನಾಚಿಕೆಪಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನೀನು ನನಗೆ ಮಾಡಲಿರುವ ಸಹಾಯಕ್ಕಾಗಿ ಸೂಚನೆಯೊಂದನ್ನು ತೋರಿಸು. ನನ್ನ ಶತ್ರುಗಳು ಆ ಸೂಚನೆಯನ್ನು ಕಂಡು ನಿರಾಶರಾಗುವರು. ನೀನು ನನ್ನ ಪ್ರಾರ್ಥನೆಗೆ ಕಿವಿಗೊಟ್ಟು ಸಹಾಯ ಮಾಡಲಿರುವಿಯೆಂದು ಅದು ತೋರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 86:17
11 ತಿಳಿವುಗಳ ಹೋಲಿಕೆ  

ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.


ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II


ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು