ಕೀರ್ತನೆಗಳು 86:5 - ಕನ್ನಡ ಸತ್ಯವೇದವು C.L. Bible (BSI)5 ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ. ಅಧ್ಯಾಯವನ್ನು ನೋಡಿ |
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.