Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:1 - ಕನ್ನಡ ಸತ್ಯವೇದವು C.L. Bible (BSI)

1 ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸ್ಥಾಪಿಸಿದ್ದು ಪರಿಶುದ್ಧ ಪರ್ವತಗಳಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:1
17 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”


ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು.


ಆದರೂ ದೇವನಾರಿಸಿದ ಗಿರಿಯನು I ಆತ ಬಯಸಿದ ಆ ಚಿರ ನಿವಾಸವನು I ನೀ ಓರೆಗಣ್ಣಿಂದ ಕಾಣುವೆಯೇನು? I ಎಲೈ ಶಿಖರೋನ್ನತ ಪರ್ವತವೇ, ಪೇಳು II


ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.


ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ : “ನನಗೆ ಒತ್ತಾಸೆ ಎತ್ತಣಿಂದ?” II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ನಿರ್ಮಿಸಿದನು ತನ್ನ ಮಂದಿರವನು ಪರ್ವತದಂತೆ I ಶಾಶ್ವತವಾಗಿ ತಾನು ಸ್ಥಾಪಿಸಿದ ಭೂಮಿಯಂತೆ II


ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು