Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:3 - ಕನ್ನಡ ಸತ್ಯವೇದವು C.L. Bible (BSI)

3 ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರ ಪಟ್ಟಣವೇ, ಜನರು ನಿನ್ನ ಬಗ್ಗೆ ಆಶ್ಚರ್ಯಕರವಾದ ಸಂಗತಿಗಳನ್ನು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:3
20 ತಿಳಿವುಗಳ ಹೋಲಿಕೆ  

ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II


ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು