Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 87:5 - ಕನ್ನಡ ಸತ್ಯವೇದವು C.L. Bible (BSI)

5 ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವದು; ಅದನ್ನು ಪರಾತ್ಪರನು ತಾನೇ ಸ್ಥಿರಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಚೀಯೋನಿನಲ್ಲಿ ಜನಿಸಿದ ಪ್ರತಿಯೊಬ್ಬರೂ ದೇವರಿಗೆ ಗೊತ್ತು. ಮಹೋನ್ನತನಾದ ದೇವರೇ ಆ ಪಟ್ಟಣವನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 87:5
14 ತಿಳಿವುಗಳ ಹೋಲಿಕೆ  

ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II


ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು