Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:10 - ಕನ್ನಡ ಸತ್ಯವೇದವು C.L. Bible (BSI)

10 ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಸತ್ತವರಿಗೆ ಅದ್ಭುತಕಾರ್ಯಗಳನ್ನು ತೋರಿಸುವಿಯೋ? ಪ್ರೇತಗಳು ಎದ್ದು ನಿನ್ನನ್ನು ಕೊಂಡಾಡುವವೋ? ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನೇ, ಸತ್ತ ಜನರಿಗಾಗಿ ನೀನು ಮಹತ್ಕಾರ್ಯಗಳನ್ನು ಮಾಡುವೆಯಾ? ಇಲ್ಲ! ದೆವ್ವಗಳು ಎದ್ದುನಿಂತು ನಿನ್ನನ್ನು ಕೊಂಡಾಡುತ್ತವೆಯೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ? ಸತ್ತವರು ಎದ್ದು ನಿಮ್ಮನ್ನು ಕೊಂಡಾಡುವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:10
13 ತಿಳಿವುಗಳ ಹೋಲಿಕೆ  

ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II


ಸ್ತುತಿಸುವುದಿಲ್ಲ ಸತ್ತವರಾರೂ ಪ್ರಭುವನು I ಕೀರ್ತಿಸರು ಪಾತಾಳಕ್ಕಿಳಿವವರು ಆತನನು II


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು