Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:12 - ಕನ್ನಡ ಸತ್ಯವೇದವು C.L. Bible (BSI)

12 ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ, ಮರೆಯುವ ದೇಶದಲ್ಲಿ ನಿನ್ನ ನೀತಿಯು ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕತ್ತಲೆಯ ಲೋಕದಲ್ಲಿ ನಿನ್ನ ಮಹತ್ಕಾರ್ಯಗಳೂ ಮರವೆಯ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:12
10 ತಿಳಿವುಗಳ ಹೋಲಿಕೆ  

ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.


ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II


ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು