Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:13 - ಕನ್ನಡ ಸತ್ಯವೇದವು C.L. Bible (BSI)

13 ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನಾದರೋ, ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಉದಯದಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನೇ, ನಿನ್ನ ಸಹಾಯಕ್ಕಾಗಿ ಮೊರೆಯಿಡುತ್ತಿದ್ದೇನೆ. ಪ್ರತಿ ಮುಂಜಾನೆಯೂ ನಿನಗೆ ಪ್ರಾರ್ಥಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ. ಉದಯಕಾಲದಲ್ಲಿ ನನ್ನ ಪ್ರಾರ್ಥನೆಯು ನಿಮ್ಮನ್ನು ಎದುರುಗೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:13
8 ತಿಳಿವುಗಳ ಹೋಲಿಕೆ  

ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.


‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


ಕಾರ್ಗತ್ತಲೂ ಗಾಢಾಂಧಕಾರವೂ ಅಲ್ಲಿವೆ ಅರಾಜಕತೆಯೂ ಕಾರಿರುಳೂ ಅದನು ಆವರಿಸಿವೆ ಬೆಳಕೇ ಕಾರಿರುಳಾಗಿ ಆ ನಾಡನ್ನು ಕವಿದಿದೆ.”


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು