Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:15 - ಕನ್ನಡ ಸತ್ಯವೇದವು C.L. Bible (BSI)

15 ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೌವನಾರಭ್ಯ ಕುಗ್ಗಿದವನೂ ಮೃತಪ್ರಾಯನೂ ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:15
13 ತಿಳಿವುಗಳ ಹೋಲಿಕೆ  

ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.


ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.


ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II


ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು