Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:17 - ಕನ್ನಡ ಸತ್ಯವೇದವು C.L. Bible (BSI)

17 ದಿನವೆಲ್ಲಾ ನನ್ನನು ಅವು ಸುತ್ತುಗಟ್ಟಿವೆ I ಪ್ರವಾಹದಂತೆ ಎನ್ನ ಮೇಲೆ ಹರಿಯುತ್ತಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡಿವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವು ದಿನವೆಲ್ಲಾ ನೀರಿನಂತೆ ನನ್ನನ್ನು ಆವರಿಸಿಕೊಂಡವೆ; ಒಟ್ಟುಗೂಡಿ ನನ್ನನ್ನು ಸುತ್ತಿಬಿಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಾಧೆಗಳೂ ನೋವುಗಳೂ ಯಾವಾಗಲೂ ನನ್ನೊಂದಿಗಿವೆ. ಬಾಧೆಗಳಿಂದಲೂ ನೋವುಗಳಿಂದಲೂ ಮುಳುಗಿ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಪ್ರವಾಹಗಳ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಳ್ಳುತ್ತವೆ; ಅವು ಸಂಪೂರ್ಣವಾಗಿ ನನ್ನನ್ನು ಮುತ್ತಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:17
11 ತಿಳಿವುಗಳ ಹೋಲಿಕೆ  

ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II


ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು