Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:4 - ಕನ್ನಡ ಸತ್ಯವೇದವು C.L. Bible (BSI)

4 ನಾನಿರುವೆ ಸಮಾಧಿ ಸೇರಲಿರುವವರಂತೆ I ಇರುವೆ ಶಕ್ತಿಯಿಲ್ಲದ ನರಮಾನವರಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ಗತಿಗೆಟ್ಟ ಮನುಷ್ಯನಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ನನ್ನನ್ನು ಸತ್ತವನಂತೆಯೂ ಬದುಕಲಾರದ ಬಲಹೀನನಂತೆಯೂ ಪರಿಗಣಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ; ನಾನು ಬಲವಿಲ್ಲದ ಪುರುಷನ ಹಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:4
14 ತಿಳಿವುಗಳ ಹೋಲಿಕೆ  

ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II


ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು