Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ಕಡುಕೋಪ ಎರಗಿಬಿಟ್ಟಿದೆ ನನ್ನ ಮೇಲೆ II ನನ್ನ ಬಾಧಿಸುತ್ತಿವೆ ಅದರ ಕಲ್ಲೋಲ ಮಾಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಕೋಪಭಾರವು ನನ್ನನ್ನು ಕುಗ್ಗಿಸಿಬಿಟ್ಟಿದೆ; ನಿನ್ನ ಎಲ್ಲಾ ತೆರೆಗಳಿಂದ ನನ್ನನ್ನು ಬಾಧಿಸಿದ್ದೀ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದಲೇ ನನ್ನನ್ನು ಶಿಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ. ನಿಮ್ಮ ಅಲೆಗಳಿಂದೆಲ್ಲಾ ನನ್ನನ್ನು ಮುಳುಗಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:7
14 ತಿಳಿವುಗಳ ಹೋಲಿಕೆ  

ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!


ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II


ಇಲ್ಲವಾಗುವೆವು ನಿನ್ನ ಕೋಪದಿಂದ I ತಲ್ಲಣಗೊಳ್ವೆವು ನಿನ್ನ ರೌದ್ರದಿಂದ II


ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು