Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:8 - ಕನ್ನಡ ಸತ್ಯವೇದವು C.L. Bible (BSI)

8 ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನ್ನ ಆಪ್ತರು ನನ್ನನ್ನು ನೋಡಿ ಅಸಹ್ಯಪಟ್ಟರು, ನನ್ನನ್ನು ಅವರು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಸಿಕ್ಕಿಬಿಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನ್ನ ಆಪ್ತರು ನನ್ನನ್ನು ಹೇಸಿ ಬಿಟ್ಟುಹೋಗುವಂತೆ ಮಾಡಿದ್ದೀ; ಕಟ್ಟಲ್ಪಟ್ಟಿದ್ದೇನೆ, ಬಿಡಿಸಿಕೊಳ್ಳಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸ್ನೇಹಿತರು ನನ್ನನ್ನು ತೊರೆದುಬಿಟ್ಟರು. ಹೊಲೆಯಾದ ಮನುಷ್ಯನಂತೆ ಅವರೆಲ್ಲರೂ ನನ್ನನ್ನು ದೂರ ಮಾಡಿದ್ದಾರೆ. ನನ್ನನ್ನು ಮನೆಯೊಳಗೆ ದೊಬ್ಬಿ ಬೀಗ ಹಾಕಿದ್ದಾರೆ; ನಾನು ಹೊರಗೆ ಹೋಗಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:8
18 ತಿಳಿವುಗಳ ಹೋಲಿಕೆ  

ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು