Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:9 - ಕನ್ನಡ ಸತ್ಯವೇದವು C.L. Bible (BSI)

9 ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಚಾಚಿ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಾಧೆಯಿಂದ ನನ್ನ ಕಣ್ಣುಗಳು ಮೊಬ್ಬಾಗಿ ಹೋಗಿವೆ. ಯೆಹೋವನೇ, ಹಗಲೆಲ್ಲಾ ಕೈಯೊಡ್ಡಿ ನಿನಗೆ ಮೊರೆಯಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಎಲ್ಲಾ ಸಂಕಟಗಳಿಂದ ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ. ಯೆಹೋವನೇ, ನಾನು ನಿನಗೆ ಎಡಬಿಡದೆ ಪ್ರಾರ್ಥಿಸುವೆನು! ನನ್ನ ಕೈಗಳನ್ನು ಎತ್ತಿ ನಿನಗೆ ಪ್ರಾರ್ಥಿಸುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:9
19 ತಿಳಿವುಗಳ ಹೋಲಿಕೆ  

ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.


ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II


ಯೇಸು ಕಣ್ಣೀರಿಟ್ಟರು.


ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ:


ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.


ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು