Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:1 - ಕನ್ನಡ ಸತ್ಯವೇದವು C.L. Bible (BSI)

1 ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನಿನ್ನ ಸತ್ಯತೆಯನ್ನು ಮುಂದಣ ಸಂತಾನದವರೆಲ್ಲರಿಗೂ ನನ್ನ ಬಾಯಿ ತಿಳಿಯಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ಸದಾಕಾಲ ಹಾಡಿ ಕೊಂಡಾಡುವೆನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:1
24 ತಿಳಿವುಗಳ ಹೋಲಿಕೆ  

ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II


ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II


ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II


ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II


ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II


ಅವನ ಸಹೋದರ ಜೆರಹನಿಗೆ ಐದು ಜನ ಮಕ್ಕಳು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ಮತ್ತು ದಾರ.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.


ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು