Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:10 - ಕನ್ನಡ ಸತ್ಯವೇದವು C.L. Bible (BSI)

10 ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ರಹಾಬನನ್ನು ಸೋಲಿಸಿದಾತನು ನೀನೇ. ನಿನ್ನ ಭುಜಬಲದಿಂದ ನೀನು ಶತ್ರುಗಳನ್ನು ಚದರಿಸಿಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:10
12 ತಿಳಿವುಗಳ ಹೋಲಿಕೆ  

ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II


“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II


ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II


ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು