Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:14 - ಕನ್ನಡ ಸತ್ಯವೇದವು C.L. Bible (BSI)

14 ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀತಿ ಮತ್ತು ನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿ ಮತ್ತು ಸತ್ಯತೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ರಾಜ್ಯವು ಸತ್ಯದ ಮೇಲೆಯೂ ನ್ಯಾಯದ ಮೇಲೆಯೂ ಕಟ್ಟಲ್ಪಟ್ಟಿದೆ. ನಿನ್ನ ಸಿಂಹಾಸನದ ಮುಂದೆ ಪ್ರೀತಿಯೂ ನಂಬಿಗಸ್ತಿಕೆಯೂ ಸೇವಕರುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:14
15 ತಿಳಿವುಗಳ ಹೋಲಿಕೆ  

ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು