Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:15 - ಕನ್ನಡ ಸತ್ಯವೇದವು C.L. Bible (BSI)

15 ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಉತ್ಸಾಹಧ್ವನಿಯನ್ನು ಕೇಳಿದ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನೇ, ನಿನ್ನ ಸದ್ಭಕ್ತರು ನಿಜವಾಗಿಯೂ ಸಂತೋಷವಾಗಿದ್ದಾರೆ. ಅವರು ನಿನ್ನ ಕರುಣೆಯ ಬೆಳಕಿನಲ್ಲಿ ವಾಸಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:15
21 ತಿಳಿವುಗಳ ಹೋಲಿಕೆ  

ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II


ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.


ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I


ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”


ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”


ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.


ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II


ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು