Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:17 - ಕನ್ನಡ ಸತ್ಯವೇದವು C.L. Bible (BSI)

17 ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣೆಯ ಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರು ಹಿಗ್ಗುವ ಬಲವು ನೀನೇ. ನಿನ್ನ ಕರುಣಾಕಟಾಕ್ಷದಿಂದ ನಮ್ಮ ಕೊಂಬು ಎತ್ತಲ್ಪಟ್ಟಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನೇ ಅವರ ಅದ್ಭುತ ಶಕ್ತಿಯಾಗಿರುವೆ. ಅವರ ಶಕ್ತಿಯು ನಿನ್ನಿಂದಲೇ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:17
14 ತಿಳಿವುಗಳ ಹೋಲಿಕೆ  

ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II


ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು