Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:18 - ಕನ್ನಡ ಸತ್ಯವೇದವು C.L. Bible (BSI)

18 ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನೇ; ಅವನು ಇಸ್ರಾಯೇಲರ ಸದಮಲಸ್ವಾಮಿಯ, ಸ್ವಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನೇ, ನೀನೇ ನಮ್ಮ ಸಂರಕ್ಷಕನು. ಇಸ್ರೇಲಿನ ಪರಿಶುದ್ಧನೇ ನಮ್ಮ ರಾಜನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮ್ಮ ಗುರಾಣಿಯು ಯೆಹೋವ ದೇವರದೇ. ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:18
18 ತಿಳಿವುಗಳ ಹೋಲಿಕೆ  

ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II


ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II


ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು