Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:19 - ಕನ್ನಡ ಸತ್ಯವೇದವು C.L. Bible (BSI)

19 ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನೆಂದರೆ, “ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಕಾಲದಲ್ಲಿ ನೀನು ದರ್ಶನದಲ್ಲಿ ನಿನ್ನ ಭಕ್ತರಿಗೆ ಹೇಳಿದ್ದೇನಂದರೆ - ಒಬ್ಬ ಶೂರನಿಗೆ ರಕ್ಷಾಬಲವನ್ನು ಅನುಗ್ರಹಿಸಿದ್ದೇನೆ; ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ನಿನ್ನ ಸದ್ಭಕ್ತರೊಂದಿಗೆ ದರ್ಶನದಲ್ಲಿ ಮಾತಾಡಿದ್ದೇನೆಂದರೆ: “ಯುದ್ಧವೀರನೊಬ್ಬನಿಗೆ ಬಲವನ್ನು ಅನುಗ್ರಹಿಸಿದೆ. ಜನಸಮೂಹದಿಂದ ಒಬ್ಬ ಯೌವನಸ್ಥನನ್ನು ಆರಿಸಿಕೊಂಡು ಗಣ್ಯವ್ಯಕ್ತಿಯನ್ನಾಗಿ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:19
17 ತಿಳಿವುಗಳ ಹೋಲಿಕೆ  

ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II


ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.


ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು