Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿನ್ನ ಪ್ರೀತಿಸಂಕಲ್ಪವು ನಿತ್ಯವು ಸಿದ್ಧಿಗೆ ಬರುತ್ತಲೇ ಇರುವುದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಪ್ರೀತಿಸಂಕಲ್ಪವು ನಿತ್ಯವೂ ಸಿದ್ಧಿಗೆ ಬರುತ್ತಲೇ ಇರುವದು; ಆಕಾಶದಲ್ಲಿ ನಿನ್ನ ಸತ್ಯತೆಯನ್ನು ಸ್ಥಾಪಿಸುವಿ ಎಂದು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿನ್ನ ಶಾಶ್ವತ ಪ್ರೀತಿಯಲ್ಲಿ ನನಗೆ ದೃಢವಾದ ನಂಬಿಕೆಯಿದೆ. ನಿನ್ನ ನಂಬಿಗಸ್ತಿಕೆಯು ಆಕಾಶಗಳಂತೆ ಶಾಶ್ವತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:2
16 ತಿಳಿವುಗಳ ಹೋಲಿಕೆ  

ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.


ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು