Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:20 - ಕನ್ನಡ ಸತ್ಯವೇದವು C.L. Bible (BSI)

20 “ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನ ಸೇವಕನಾದ ದಾವೀದನನ್ನು ಕಂಡು ಪರಿಶುದ್ಧತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಸೇವಕನಾದ ದಾವೀದನನ್ನು ಕಂಡುಕೊಂಡೆ. ನನ್ನ ವಿಶೇಷವಾದ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:20
6 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು