Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:21 - ಕನ್ನಡ ಸತ್ಯವೇದವು C.L. Bible (BSI)

21 ನನ್ನ ಕೈಯ ಆಸರೆ ಅವನಿಗಿದೆ ಸತತ I ನನ್ನ ಭುಜಬಲವು ಅವನಿಗೆ ಶಕ್ತಿಯುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವದು; ನನ್ನ ಭುಜವು ಅವನನ್ನು ಬಲಪಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಬಲಗೈಯಿಂದ ದಾವೀದನಿಗೆ ಬೆಂಬಲ ನೀಡಿದೆ, ನನ್ನ ಶಕ್ತಿಯಿಂದ ಅವನನ್ನು ಬಲಗೊಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:21
11 ತಿಳಿವುಗಳ ಹೋಲಿಕೆ  

ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ : “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.


ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು