Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:29 - ಕನ್ನಡ ಸತ್ಯವೇದವು C.L. Bible (BSI)

29 ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವನ ಕುಟುಂಬವು ಶಾಶ್ವತವಾಗಿರುವುದು. ಅವನ ರಾಜ್ಯವು ಆಕಾಶಗಳಿರುವವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:29
16 ತಿಳಿವುಗಳ ಹೋಲಿಕೆ  

“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II


ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು